7
Bangalore: ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದಾಗ ಮರದ ಕೊಂಬೆಯೊಂದು ಬಿದ್ದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಸವನಗುಡಿಯ ಬ್ರಹ್ಮಚೈತನ್ಯ ಮಂದಿರದ ಬಳಿ ನಡೆದಿದೆ.
ಶ್ರೀನಿವಾಸನಗರದ ನಿವಾಸಿ 29 ವರ್ಷದ ಅಕ್ಷಯ್ ಎಂಬುವವರು ಗಂಭಿರವಾಗಿ ಗಾಯಗೊಂಡ ಸವಾರರು. ಇವರು ಹೆಚ್‌ಆರ್ ಆಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಎದುರುಗಡೆ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತೀವ್ರತೆಗೆ ಪ್ರಶಾಂತ್ ನೆಲಕ್ಕೆ ಬಿದ್ದಿದ್ದಾರೆ.
ಕೂಡಲೇ ಸ್ಥಳೀಯರು ಪ್ರಶಾಂತ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
