Home » Nelyadi: ನೆಲ್ಯಾಡಿ ಬಳಿ ಭೀಕರ ರಸ್ತೆ ಅಪಘಾತ: ಹಿಟಾಚಿಗೆ ಡಿಕ್ಕಿ ಹೊಡೆದ ಬಸ್‌, ಓರ್ವ ಸಾವು, ಹಲವು ಮಂದಿಗೆ ಗಾಯ

Nelyadi: ನೆಲ್ಯಾಡಿ ಬಳಿ ಭೀಕರ ರಸ್ತೆ ಅಪಘಾತ: ಹಿಟಾಚಿಗೆ ಡಿಕ್ಕಿ ಹೊಡೆದ ಬಸ್‌, ಓರ್ವ ಸಾವು, ಹಲವು ಮಂದಿಗೆ ಗಾಯ

by Mallika
0 comments

Nelyadi: ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕಾರ್ಕಳ ಹೆರ್ಮುಂಡೆ ಗ್ರಾಮದ ಶಂಕರ ನಾರಾಯಣ ಭಟ್‌ (58) ಮೃತ ಪ್ರಯಾಣಿಕ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ವೀಪರ್‌ ಬಸ್‌ ಲಾವತ್ತಡ್ಕ ಬಳಿ ಹೆದ್ದಾರಿ ಬದಿ ನಿಲ್ಲಿಸಿದ್ದ ಹಿಟಾಚಿ ಎಕ್ಸ್‌ಕವೇಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಅಪಘಾತ ಸಂಭವಿಸಿದೆ. ಬಸ್‌ನ ಮುಂಭಾಗ ಸಂಪೂರ್ಣ ಜಖಂಡಗೊಂಡಿದೆ. ಹಲವು ಪ್ರಯಾಣಿಕರು ಸಿಕ್ಕಾಕಿಕೊಂಡು ಗಾಯಗೊಂಡಿರುವ ಕುರಿತು ವರದಿಯಾಗಿದೆ.

ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಇವರನ್ನು ಪುತ್ತೂರು, ಮಂಗಳೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿದ್ದಾರೆ.

You may also like