Kamal Hassan: ಥಗ್‌ಲೈಫ್ ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್ ದೊರಲಿದೆ. ನಿಮಗೆ ಇಷ್ಟ ಇಲ್ಲ ಅಂದ್ರೆ ಸಿನಿಮಾ ನೋಡ್ಬೇಡಿ ಎಂದು ಸುಪ್ರೀಂಕೋರ್ಟ್ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ ಅವಕಾಶ ನೀಡಿದೆ.
ಸುಪ್ರೀಂಕೋರ್ಟ್ ಥಗ್‌ಲೈಫ್ ಸಿನಿಮಾ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಚಿತ್ರತಂಡಕ್ಕೆ ರಿಲೀಫ್ ದೊರಕಿದೆ.
ಕನ್ನಡ ತಮಿಳಿನಿಂದ ಬಂದದ್ದು ಎನ್ನುವ ಹೇಳಿಕೆಯನ್ನು ನೀಡುವ ಮೂಲಕ ಕರ್ನಾಟಕದ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಕಮಲ್ ಹಾಸನ್ ಇಲ್ಲಿಯವರೆಗೂ ಕರ್ನಾಟಕದ ಜನರಲ್ಲಿ ಕ್ಷಮೆಯನ್ನು ಕೇಳಿದ್ದಿಲ್ಲ. ಇದೀಗ ಕರ್ನಾಟಕದಲ್ಲಿ ಥಗ್‌ಲೈಫ್ ಸಿನಿಮಾ ಬಿಡುಗಡೆಗೆ ನಿಷೇಧ ಹೇರಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿ, ನಟನ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಯನ್ನು ತಡೆಯುವುದಾಗಿ ಬೆದರಿಕೆ ಹಾಕಿರುವ ಗುಂಪುಗಳನ್ನು ತರಾಟೆಗೆ ತೆಗೆದುಕೊಂಡಿದೆ.
ಚಿತ್ರ ಬಿಡುಗಡೆಗೆ ಬೆದರಿಸುವುದು, ಅಡ್ಡಿ ಮಾಡುವುದು ಸರಿಯಲ್ಲ. ನಿಮಗೆ ಇಷ್ಟ ಇಲ್ಲ ಅಂದರೆ ಸಿನಿಮಾ ನೋಡಬೇಡಿ ಎಂದು ಸುಪ್ರೀಂಕೋರ್ಟ್ ಹೇಳಿದೆ.
