7
Upsc: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025- 26ನೇ ಸಾಲಿನ ಯುಪಿಎಸ್ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮುಸ್ಲಿಂ ಸಿಖ್ ಕ್ರಿಶ್ಚಿಯನ್ ಪಾರ್ಸಿ ಜೈನ ಬೌದ್ಧ ಸಮುದಾಯಗಳಿಗೆ ಸೇರಿದ 21ರಿಂದ 35 ವಯಸ್ಸಿನ ಒಳಗಿರುವವರು ಹಾಗೂ ಕರ್ನಾಟಕ ರಾಜ್ಯದ ನಿವಾಸಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ನಿಗದಿ ಪಡಿಸಿದಂತಹ ಸಮುದಾಯಕ್ಕೆ ಸೇರಿದ್ದೇವೆ ಎಂಬುದಕ್ಕೆ ಜಾತಿ ಪ್ರಮಾಣ ಪತ್ರವನ್ನು ಒಳಗೊಂಡಿರಬೇಕು ಹಾಗೂ ಅರ್ಜಿ ಸಲ್ಲಿಸಲು ಜೂನ್ 21 ಕೊನೆಯ ದಿನಾಂಕವಾಗಿದ್ದು, ಅಲ್ಪಸಂಖ್ಯಾತರಿಗೆ ಸಂಬಂಧಪಟ್ಟಂತಹ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
