Sullia: ಸುಳ್ಯದಲ್ಲಿ (Sullia) ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಿ, ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆ ಹಾಗೂ ಗೊಂದಲಗಳನ್ನು ಪರಿಹರಿಸಲು ಜಂಟಿ ಸರ್ವೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈಗಾಗಲೇ ಸರ್ವೆ ಮಾಡಲು ಸೂಚನೆ ನೀಡಲಾಗಿತ್ತು. ಆದರೆ ಕಾರಣಾಂತರಗಳಿಂದ ವಿಳಂಬವಾಗಿದೆ.
ಇದನ್ನು ಆದ್ಯತೆಯ ಮೇರೆಗೆ ಪೂರ್ತಿ ಮಾಡಲಾಗುವುದು ಎಂದು ಹೇಳಿದರು.
ಕಂದಾಯ ಇಲಾಖೆ ಜನರಿಗೆ ಶೀಘ್ರ ಸ್ಪಂದನೆ ಮಾಡಬೇಕು, ಬಡವರ ಕೆಲಸವನ್ನು ಆದ್ಯತೆಯ ಮೇರೆಗೆ ಮಾಡಬೇಕು. ಅನವಶ್ಯಕ ವಿಳಂಬ ಮಾಡಬಾರದು ಎಂದು ಹೇಳಿದರು.
ಕಂದಾಯ ಇಲಾಖೆಯ ಕೆಲಸ ಕಾರ್ಯಗಳ ಬಗ್ಗೆ ನಿರಂತರ ಪರಿಶೀಲನೆ ಮಾಡಲಾಗುವುದು. ಅಕ್ರಮ ಸಕ್ರಮ, 94ಸಿ ಕಡತ 11/9 ಅನ್ನು ಶೀಘ್ರ ಮಾಡಬೇಕು ಎಂದು ಸೂಚಿಸಿದರು. ಕಾರ್ಯಗಳ ಬಗ್ಗೆ ನಿರಂತರ ಪರಿಶೀಲನೆ ಮಾಡಲಾಗುವುದು. ಅಕ್ರಮ ಸಕ್ರಮ, 94ಸಿ ಕಡತ 11/9 ಅನ್ನು ಶೀಘ್ರ ಮಾಡಬೇಕು ಎಂದು ಸೂಚಿಸಿದರು.
ಕಂದಾಯ ಇಲಾಖೆಯಲ್ಲಿ ಜನರ ಕೆಲಸಗಳಿಗೆ ಅನಗತ್ಯ ವಿಳಂಬ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸರಕಾರಕ್ಕೆ ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯ ಇಲ್ಲಾ ಎಂದ ಸಚಿವರು ಶಾಸಕರು, ನಗರ ಪಂಚಾಯತ್ ಅಧ್ಯಕ್ಷರು ಹಾಗೂ ಸಾರ್ವಜನಿಕರು ಮುಂದಿರಿಸಿದ ವಿವಿಧ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು, ಬೇಡಿಕೆಗಳ ಪ್ರಸ್ತಾವನೆಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ ಸಚಿವರು ತಿಳಿಸಿದರು.
ಜೊತೆಗೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ ಅಕ್ರಮ ಸಕ್ರಮ ಕಡತಗಳು, 94ಸಿ ಕಡತಗಳು ವಿಲೇವಾರಿ ಆಗುತ್ತಿಲ್ಲ, 9/11 ಕಾನೂನು ಸರಳೀಕರಣ ಮಾಡಬೇಕು ಎಂದು ಹೇಳಿದರು.ಅಡಿಕೆ ಹಳದಿ ರೋಗದಿಂದ ಕೃಷಿ ಹಾನಿ ಸಂಭವಿಸಿದ ಕೃಷಿಕರಿಗೆ ಪರಿಹಾರಕ್ಕೆ ಪ್ರತ್ಯೇಕ ಪ್ಯಾಕೇಜ್ ನೀಡಬೇಕು, ರಸ್ತೆ ಅಭಿವೃದ್ಧಿಗೆ ಅಂಬೇಡ್ಕರ್ ಭವನ ಪೂರ್ತಿ ಮಾಡಲು ಅನುದಾನ ನೀಡಬೇಕು ಎಂದು ಹೇಳಿದರು.
