Home » SSLC Student: ಶಾಲೆಯ ಎರಡನೇ ಮಹಡಿಯಿಂದ ಬಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

SSLC Student: ಶಾಲೆಯ ಎರಡನೇ ಮಹಡಿಯಿಂದ ಬಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

by Mallika
0 comments

SSLC Student: ಮಲ್ಲೇಶ್ವರಂನ 13ನೇ ಕ್ರಾಸ್‌ನಲ್ಲಿರುವ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಎರಡನೇ ಮಹಡಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಕೆಯನ್ನು ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿದ್ಯಾರ್ಥಿನಿ ಬೆಳಗ್ಗಿನ ಉಪಹಾರ ಸೇವಿಸದೆ, ತಲೆಸುತ್ತು ಬಂದು ಕೆಳಗೆ ಬಿದ್ದಿದ್ದಾಳೆ ಎನ್ನಲಾಗಿದೆ. ಶಾಸಕ ಅಶ್ವತ್ಥನಾರಾಯಣ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಆರೋಗ್ಯದ ಕುರಿತು ವಿಚಾರಣೆ ಮಾಡಿದ್ದಾರೆ.

You may also like