Home » Male Mahadeshwara: ಮಾದಪ್ಪನ ಹುಂಡಿಯಲ್ಲಿ 2.65 ಕೋಟಿ ಸಂಗ್ರಹ – 58 ಗ್ರಾಂ ಚಿನ್ನ ಹಾಗೂ 2,070 ಬೆಳ್ಳಿ ಪದಾರ್ಥಗಳು ಹುಂಡಿಗೆ

Male Mahadeshwara: ಮಾದಪ್ಪನ ಹುಂಡಿಯಲ್ಲಿ 2.65 ಕೋಟಿ ಸಂಗ್ರಹ – 58 ಗ್ರಾಂ ಚಿನ್ನ ಹಾಗೂ 2,070 ಬೆಳ್ಳಿ ಪದಾರ್ಥಗಳು ಹುಂಡಿಗೆ

0 comments

Male Mahadeshwara: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 34 ದಿನಗಳ ಅವಧಿಯಲ್ಲಿ 2.65 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾ ವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.

ಎಣಿಕೆ ಕಾರ್ಯವು ಸಂಜೆ 7:30 ಗಂಟೆಯವರೆಗೂ ನಡೆಯಿತು. ಸರ್ಕಾರಿ ರಜಾ ದಿನ, ಅಮಾವಾಸ್ಯೆ ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,65,04, 712 ನಗದು 58 ಗ್ರಾಂ ಚಿನ್ನ ಹಾಗೂ 2,070 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಅಲ್ಲದೆ, ವಿದೇಶಿ 15 ನೋಟುಗಳು, ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 36 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಈ ರಘು,ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ಮಹದೇವ್, ಪ್ರಾಧಿಕಾರದ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಬಸವಣ್ಣ, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಪೊಲೀಸ್ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

You may also like