8
Application: 2025-26 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯವೇತನ ದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ (ಬೆಂಗಳೂರು ಹೊರತುಪಡಿಸಿ) 03 ತಿಂಗಳ ಯು.ಪಿ.ಎಸ್.ಸಿ ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪ ಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
