Home » Indian Railway: ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ!

Indian Railway: ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ!

0 comments

Indian Railway: ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದು, ಬೆಂಗಳೂರಿನಿಂದ ಕರಾವಳಿಗೆ ಬರುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

 

ಕಿಲೋಮೀಟ‌ರ್ ಸಂಖ್ಯೆ 74 ಮತ್ತು 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರಿ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

You may also like