B Dayanand: ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಇದೀಗ ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಜಗದೀಶ್, ಬಿ.ದಯಾನಂದ್ ಗೆ ನೋಟಿಸ್ ನೀಡಿದ್ದಾರೆ. ಆದರೆ ಮಾಜಿ ಕಮಿಷನರ್ ಬಿ ದಯಾನಂದ ಅವರು ವಿಚಾರಣೆಗೆ ಗೈರು ಹಾಜರಾಗಿದ್ದಾರೆ.
ಹೌದು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ನಡೆಸುತ್ತಿರುವ ವಿಚಾರಣಾಧಿಕಾರಿಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಎದುರು ಶುಕ್ರವಾರ ಇಬ್ಬರು ಡಿಸಿಪಿಗಳು ಸೇರಿ ಆರು ಮಂದಿ ಪೊಲೀಸ್ ಅಧಿಕಾರಿಗಳು ವಿಚಾರಣೆಗೆ ಹಾಜರಾದರು. ಆದರೆ, ನಗರದ ಮಾಜಿ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ವಿಚಾರಣೆಗೆ ಗೈರು ಹಾಜರಾದರು. ಒಟ್ಟು 40ಕ್ಕೂ ಅಧಿಕ ಪೊಲೀಸರ ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಳ್ಳಲಾಯಿತು.
ಇನ್ನು ಉತ್ತರ ವಿಭಾಗದ ಡಿಸಿಪಿ ಸೈದುಲ್ಲಾ ಅಡಾವತ್ ಮತ್ತು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಭರಮಸಾಗರ್, ಇಬ್ಬರು ಇನ್‌ಸ್ಪೆಕ್ಟರ್‌ಗಳು, ಇಬ್ಬರು ಎಸಿಪಿಗಳು ವಿಚಾರಣೆಗೆ ಹಾಜರಾಗಿದ್ದರು. ವಿಚಾರಣಾ ತಂಡ ಸಂಜೆ 5 ಗಂಟೆವರೆಗೂ ಅಧಿಕಾರಿಗಳನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿ, ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ.
