Home » Crime: ಜೆಲ್ಲಿ ಚಾಕೊಲೇಟ್ ರೂಪದಲ್ಲಿ ಗಾಂಜಾ ಮಾರಾಟ: ಇಬ್ಬರ ಅರೆಸ್ಟ್!

Crime: ಜೆಲ್ಲಿ ಚಾಕೊಲೇಟ್ ರೂಪದಲ್ಲಿ ಗಾಂಜಾ ಮಾರಾಟ: ಇಬ್ಬರ ಅರೆಸ್ಟ್!

0 comments

Crime: ಜೆಲ್ಲಿ ಚಾಕೊಲೇಟ್ ನಲ್ಲಿ ಗಾಂಜಾ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳೇ ಇದರ ಗ್ರಾಹಕರು. ಈ ಬಗ್ಗೆ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಜೆಲ್ಲಿ ಚಾಕಲೇಟ್ ಗಾಂಜಾ ಗ್ಯಾಂಗನ್ನು ಬಂಧಿಸಿದ್ದಾರೆ.

ಮೊಹಮದ್ ಜಾಹೀದ್ ಹಾಗೂ ಇಸ್ಮಾಯಿಲ್‌ ಅದ್ಘಾನ್ ಬಂಧಿತ ಆರೋಪಿಗಳು. ತಲೆಮರೆಸಿಕೊಂಡ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಒಟ್ಟು ಮೂರು ಲಕ್ಷ ಮೌಲ್ಯದ 1440 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ ಗಾಂಜಾದ ಬಟ್ಟಿ ಇಳಿಸಿರುವ ರಸವನ್ನೇ ಜೆಲ್ಲಿ ಚಾಕೊಲೇಟ್ ಜೊತೆ ಬೆರೆಸುತ್ತಿರುವುದು ಪತ್ತೆ ಆಗಿದೆ.

ಇದನ್ನೂ ಓದಿ:Mukesh Rawal: ರೈಲ್ವೆ ಹಳಿಯಲ್ಲಿ ಸ್ಟಾರ್ ನಟನ ಶವ ಪತ್ತೆ- ಸಿಸಿಟಿವಿ ದೃಶ್ಯಗಳಿಂದ ಬಯಲಯ್ತು ಭಯಾನಕ ಸತ್ಯ!!

You may also like