Home » Bengaluru: ಐಪಿಎಸ್ ಅಧಿಕಾರಿ ದಯಾನಂದ ಗುರುವಾರ ವಿಚಾರಣೆಗೆ ಹಾಜರು

Bengaluru: ಐಪಿಎಸ್ ಅಧಿಕಾರಿ ದಯಾನಂದ ಗುರುವಾರ ವಿಚಾರಣೆಗೆ ಹಾಜರು

0 comments

Bengaluru: ಬೆಂಗಳೂರಿನಲ್ಲಿ ನಡೆದಂತಹ ಆರ್ಸಿಬಿ ವಿಜಯೋತ್ಸವದ ಸಂದರ್ಭದ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಅಮಾನತುಕೊಂಡಿದ್ದ ಐಪಿಎಸ್ ಅಧಿಕಾರಿ ದಯಾನಂದ್ ಅವರು ಗುರುವಾರ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್‌, ಎರಡು ಬಾರಿ ನೋಟಿಸ್‌ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಬಿ.ದಯಾನಂದ್‌ 3 ವಾರಗಳ ಬಳಿಕ ಗುರುವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅವರನ್ನು ವಿಚಾರಣೆ ನಡೆಸಲಾಗಿದೆ.

ಕಾರ್ಯಕ್ರಮ ಆಯೋಜನೆಗೆ ಕೆಎಸ್ ಸಿಎ ಸೇರಿ ಸಂಬಂಧಿಸಿದ ಸಂಸ್ಥೆಗಳು ಅನುಮತಿ ಕೋರಿರುವುದು, ಭದ್ರತಾ ಕ್ರಮಗಳು, ಸಾವು ನೋವಿನ ಮಾಹಿತಿ ಸೇರಿ ಇನ್ನಿತರ ವಿಚಾರಗಳ ಬಗ್ಗೆ ವಿಚಾರಣಾಧಿಕಾರಿ ಹೇಳಿಕೆ ಪಡೆದುಕೊಂಡರು ಎಂದು ತಿಳಿದುಬಂದಿದೆ.

ಆರ್‌ಸಿಬಿ ಆಡಳಿತ ಮಂಡಳಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್‌ಸಿಎ) ಮತ್ತು ಡಿಎನ್‌ಎ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಕೋರಿದ ಅನುಮತಿಗಳು ಹಾಗೂ ಪೊಲೀಸ್ ಇಲಾಖೆಯೊಳಗಿನ ಮತ್ತು ರಾಜ್ಯ ಸರ್ಕಾರದೊಂದಿಗಿನ ಆಂತರಿಕ ಮಾತುಕತೆ ಬಗ್ಗೆಯೂ ಅಧಿಕಾರಿಗಳು ಪ್ರಶ್ನಿಸಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ;Indus Water Treaty: ಸಿಂಧೂ ಒಪ್ಪಂದದ ಬಗ್ಗೆ ಭಾರತದ ನಿಲುವನ್ನು ಪಾಕ್ ಪತ್ರಗಳು ಬದಲಾಯಿಸಲ್ಲ: , ಪಾಕ್‌ಗೆ ತಿರುಗೇಟು ಕೊಟ್ಟ ಸಚಿವ ಸಿಆರ್ ಪಾಟೀಲ್

You may also like