Home » Kodishree: ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು ಮಾಡಿದ್ದ ಅಂತರಾಜ್ಯ ಕಳ್ಳನ ಬಂಧನ

Kodishree: ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು ಮಾಡಿದ್ದ ಅಂತರಾಜ್ಯ ಕಳ್ಳನ ಬಂಧನ

0 comments

Kodishree: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಬಳಿ ಏಳು ವರ್ಷಗಳ ಹಿಂದೆ ನಡೆದ ಕಳ್ಳತನಕ್ಕೆ ಸಂಬಂಧಪಟ್ಟಂತೆ ಅರಸೀಕೆರೆ ರೈಲ್ವೆ ಪೊಲೀಸರು ಕಳ್ಳನನ್ನು ಬಂಧನ ಮಾಡಿದ್ದಾರೆ. ಉತ್ತರಾಖಂಡದ ನೈನಿತಾಲ್‌ ಮೂಲದ ಜಿತೇಂದ್ರ ಕುಮಾರ್‌ ಎಂಬಾತನೇ ಅಂತರಾಜ್ಯ ಕಳ್ಳ.

2018 ರಲ್ಲಿ ಸ್ವಾಮೀಜಿ ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಲೆದರ್‌ ಬ್ಯಾಗ್‌ನಲ್ಲಿ 250 ಗ್ರಾಂ ಚಿನ್ನದ ಸರ, ಗೌರಿಶಂಕರ ರುದ್ರಾಕ್ಷಿ ಪದಕ, 50 ಗ್ರಾಂನ ಎರಡು ಚಿನ್ನದ ಉಂಗುರಗಳು ಹಾಗೂ 1.62 ಲಕ್ಷ ರೂ. ನಗದು ಹಣವನ್ನು ಇಟ್ಟಿದ್ದ ಬ್ಯಾಗನ್ನು ತಲೆಯ ಕೆಳಗೆ ಇಟ್ಟು ನಿದ್ದೆಗೆ ಜಾರಿದ್ದ ಸ್ವಾಮೀಜಿ, ಅನಂತರ ಎಚ್ಚರಗೊಂಡಿದ್ದು 2.15 ಕ್ಕೆ. ಆಗ ಬ್ಯಾಗ್‌ನಲ್ಲಿದ್ದ ನಗ, ನಗದು ಕಾಣೆಯಾಗಿತ್ತು.

ಈ ಕುರಿತು ಅರಸೀಕೆರೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿ ತನಿಖೆ ಕೈಗೆತ್ತಿಕೊಂಡಿದ್ದರು. ಏಳು ವರ್ಷಗಳ ನಿರಂತರ ತನಿಖೆಯ ನಂತರ ಪೊಲೀಸರು ಜಿತೇಂದ್ರ ಕುಮಾರ್‌ನನ್ನು ಬಂಧನ ಮಾಡಿ ಆತನಿಂದ 22.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಪೊಲೀಸರು ವಶಪಡಿಸಿದ್ದಾರೆ.

ಇದನ್ನೂ ಓದಿ: Bengaluru: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ

You may also like