Home » Award: ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ – ನವಂಬರ್ನಲ್ಲಿ ನಡೆಯೋ ಕೃಷಿ ಮೇಳದಲ್ಲಿ ಪ್ರಶಸ್ತಿ ಪ್ರದಾನ

Award: ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ – ನವಂಬರ್ನಲ್ಲಿ ನಡೆಯೋ ಕೃಷಿ ಮೇಳದಲ್ಲಿ ಪ್ರಶಸ್ತಿ ಪ್ರದಾನ

by V R
0 comments

Award: ಬೆಂಗಳೂರಿನೆ ಕೃಷಿ ವಿಶ್ವವಿದ್ಯಾನಿಲಯದ ಕೃಷಿ ಮೇಳ-2025ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಹಾಗೂ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ರಾಜ್ಯಮಟ್ಟದ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ಡಾ. ಎಂ.ಎಚ್. ಮರಿಗೌಡ ಅತ್ಯುತ್ತಮ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಹಾಗೂ ಡಾ, ಆರ್ ದ್ವಾರಕೀನಾಥ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಹಾಗೂ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.

ನವೆಂಬರ್‌ನಲ್ಲಿ ನಡೆಯಲಿರುವ ಕೃಷಿ ಮೇಳದಲ್ಲಿ ಪ್ರಶಸ್ತಿಗಳನ್ನು ನೀಡಲಾಗುವುದು. ಆಯಾ ಜಿಲ್ಲೆಯ ಆಸಕ್ತ ರೈತರು ನಿಗದಿತ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನೆ, ಅರಣ್ಯ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳಲ್ಲಿ ಅಥವಾ ಕೃಷಿ ವಿಶ್ವವಿದ್ಯಾನಿಲಯದ ವೆಬ್ಸೈಟ್ www.uasbangalore.edu. in ನಿಂದಲೂ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿಗಳ ಶಿಫಾರಸು ಪಡೆದು ಕೃಷಿ ವಿಜ್ಞಾನ ಕೇಂದ್ರಕ್ಕೆ ಜುಲೈ 31 ರೊಳಗೆ ತಲುಪಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಮೊ – 9449866933 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Ramanagara : ಕೋರ್ಟ್ ಮೆಟ್ಟಿಲು ಹತ್ತಲಾಗದ ಮಹಿಳೆ – ಹೊರಗೆ ಬಂದು ವಿಚಾರಣೆ ನಡೆಸಿದ ಜಡ್ಜ್

You may also like