3
MUDA Case: ರಾಜ್ಯದ್ಯಂತ ಬಾರಿ ಸದ್ದು ಮಾಡಿದ್ದ ‘ಮುಡಾ’ ಹಗರಣ ಕೇಸ್ ಕೆಲವು ದಿನಗಳಿಂದ ತಣ್ಣಗಾಗಿತ್ತು. ಇದೀಗ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆದಿದೆ.
ವಿಚಾರಣೆ ಬಳಿಕ ಸಿಎಂ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆ ನೋಟಿಸ್ ಜಾರಿಗೊಳಿಸಲು ಕೋರ್ಟ್ ಆದೇಶ ಹೊರಡಿಸಿದೆ.
