3
Accident: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪೀಣ್ಯ 8 ನೇ ಮೈಲಿಯಲ್ಲಿ ನಡೆದಿದೆ.
ಲಕ್ಷ್ಮೀ (30) ಮೃತ ಮಹಿಳೆ. ಲಕ್ಷ್ಮೀ ಅವರ ಪತಿ ಹಾಗೂ ಒಂದು ವರ್ಷದ ಮಗುವಿನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದು, ಹಿಂಬದಿಯಿಂದ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮಹಿಳೆಯ ಪತಿ ಹಾಗೂ ಮಗು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
