Home » Accident: ಬೆಂಗಳೂರು ಮೈಸೂರು ಹೈವೇಯಲ್ಲಿ ಭೀಕರ ಅಪಘಾತ: 3 ಜನ ಸ್ಥಳದಲ್ಲೇ ಸಾವು

Accident: ಬೆಂಗಳೂರು ಮೈಸೂರು ಹೈವೇಯಲ್ಲಿ ಭೀಕರ ಅಪಘಾತ: 3 ಜನ ಸ್ಥಳದಲ್ಲೇ ಸಾವು

by V R
0 comments

Accident: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ ಉಂಟಾಗಿದ್ದು, ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ರಾಮನಗರ ತಾಲೂಕಿನ ಜಯಪುರಗೇಟ್‌ ಬಳಿ ಈ ಘಟನೆ ಇಂದು ಬೆಳಗ್ಗೆ ನಡೆದಿರುವ ಕುರಿತು ವರದಿಯಾಗಿದೆ.

ಚಿಕ್ಕನಾಯಕಹಳ್ಳಿಯ ತಮ್ಮಣ್ಣಗೌಡ (56), ಪುತ್ರ ಮುತ್ತುರಾಜ್‌ (28), ಹಾಸನ ಮೂಲದ ಚಾಲಕ ಸಚಿನ್‌ (27) ಮೃತ ಪಟ್ಟವರು. ಸಂಜು ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಡವಿನಕೊಡಿ ಗ್ರಾಮದಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿ ವಾಪಾಸು ಬೆಂಗಳೂರಿಗೆ ಬರುವ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ.

ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

You may also like