Home » Goods Train: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

Goods Train: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

by V R
0 comments

Goods Train: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನ (Goods Train) 4 ವ್ಯಾಗನ್‌ಗಳಲ್ಲಿ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ತಮಿಳುನಾಡಿನ (Tamil Nadu) ತಿರುವಲ್ಲೂರು (Tiruvallur) ರೈಲು ನಿಲ್ದಾಣದ ಬಳಿ ನಡೆದಿದೆ.

ಇಂದು ಮುಂಜಾನೆ 5:30ರ ಸುಮಾರಿಗೆ ನಡೆದ ಬೆಂಕಿ ಅವಘಡದಿಂದ ರೈಲು ಹೊತ್ತಿ ಉರಿದಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಮನಾಲಿಯಿಂದ ತಿರುಪತಿ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ತಿರುವಲ್ಲೂರು ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹತ್ತಿರದ ಪ್ರದೇಶಗಳ ಜನರನ್ನು ಸ್ಥಳಾಂತರಿಸಲಾಗಿದೆ. ಘಟನೆಗೆ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

You may also like