6
Bantwala: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27 ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 11 ನೇ ಆರೋಪಿ ಅಮ್ಮುಂಜೆ ಗ್ರಾಮದ ಶಾಹಿತ್ ಯಾನೆ ಸಾಹಿತ್ (24) ನನ್ನು ಸೋಮವಾರ ಬಂಧನ ಮಾಡಿದ್ದಾರೆ.
ಆರೋಪಿಯನ್ನು ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ನೀಡಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಇವರೆಲ್ಲ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈ ಪ್ರಕರಣದ ಇಬ್ಬರು ಆರೋಪಿಗಳಾದ ತುಂಬೆ ನಿವಾಸಿ ಅಭಿನ್ ರೈ ಹಾಗೂ ಶೃಂಗೇರಿ ನಿವಾಸಿ ರವಿ ಸಂಜಯ್ ಅವರ ಜಾಮೀನು ಅರ್ಜಿಯನ್ನು ಜು.15 ರಂದು ನ್ಯಾಯಾಲಯವು ತಿರಸ್ಕರಿಸಿದೆ.
