Ramya: ನಟಿ ರಮ್ಯಾ (Ramya Divya Spandana) ಅವರು ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟೀವ್ ಆಗಿರುವ ಅವರು ಬರೀ ಸಿನಿಮಾಗಳ ವಿಷಯ ಮಾತ್ರವಲ್ಲದೇ ಅನೇಕ ಸಾಮಾಜಿಕ ಸಂಗತಿಗಳ ಬಗ್ಗೆಯೂ ಮಾತನಾಡುತ್ತಾರೆ. ಇದೀಗ ನಟಿ ರಮ್ಯಾ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಹಲೋ ದರ್ಶನ್ ಅಭಿಮಾನಿಗಳೇ ನನ್ನ ಇನ್ ಸ್ಟಾಗ್ರಾಮ್ ಖಾತೆಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.
ಇನ್ ಸ್ಟಾಗ್ರಾಂನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ನಟಿ ರಮ್ಯಾ, ನನಗೆ ಮಾಡುತ್ತಿರುವ ಕಮೆಂಟ್ ಗೆ ಇಲ್ಲಿದೆ ನೋಡಿ ಉತ್ತರ. ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ- ನನ್ನ ಇನ್ಸ್ಟಾಗ್ರಾಮ್ಗೆ ಸ್ವಾಗತ, ರೇಣುಕಸ್ವಾಮಿ ಅವರ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಾಮೆಂಟ್ಗಳೇ ಸಾಕ್ಷಿ! ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ, ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಪೋಸ್ಟ್ ಮಾಡಿದ್ದಾರೆ.
ದರ್ಶನ್ ಕೇಸ್ ಬಗ್ಗೆ ರಮ್ಯಾ ಹೇಳಿದ್ದೇನು?
ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ’ ಎಂದು ರಮ್ಯಾ ಅವರು ಇನ್ಸ್ಟಾಗ್ರಾಮ್ ಸ್ಟೋರಿ ಮತ್ತು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಜಾಮೀನು ವಿಚಾರಣೆ ನಡೆದ ಬಳಿಕ ರಮ್ಯಾ ಈ ರೀತಿ ಪೋಸ್ಟ್ ಮಾಡಿದ್ದರು. ಆದರೆ ಬಳಿಕ ಕಮೆಂಟ್ ಆಯ್ಕೆಯನ್ನು ಅವರು ಆಫ್ ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೇಸ್ ಮಾತ್ರವಲ್ಲದೇ ಧರ್ಮಸ್ಥಳದ ವಿವಾದದ ಬಗ್ಗೆಯೂ ರಮ್ಯಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಧರ್ಮಸ್ಥಳದಲ್ಲಿ ಆಗಿರುವ ಪ್ರಕರಣಗಳ ಬಗ್ಗೆ ನ್ಯಾಯಯುತವಾದ ತನಿಖೆ ಆಗುತ್ತದೆ ಎಂಬ ಭರವಸೆ ಇದೆ. ನಮಗೆ ಸತ್ಯ ತಿಳಿಯಬೇಕು’ ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.
