4
Mangaluru: ನಗರದ ಪಂಪ್‌ವೆಲ್‌ನಲ್ಲಿರುವ ಪಂಪ್‌ವೆಲ್‌ನಲ್ಲಿರುವ ಭಾರತ್ ಆಗ್ರೋ ಕೋಳಿ ಆಹಾರ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಅಪಾರ ಹಾನಿ ಉಂಟಾಗಿದೆ.
ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಕೋಳಿ ಆಹಾರ ಮತ್ತು ಪೀಠೋಪಕರಣ ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Accident: ಜಾರ್ಖಂಡ್‌ನಲ್ಲಿ ರಸ್ತೆ ಅಪಘಾತ – 18 ಭಕ್ತರ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
