2
Dharmasthala : ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ ಶೋಧ ಕಾರ್ಯ ಹಾಗೂ ತನಿಖೆ ತೀವ್ರಗೊಂಡಿದೆ. ಇಂದು ಮೂರು ಸಮಾಧಿಗಳ ಅಗೆತ ಕಾರ್ಯ ಆರಂಭಗೊಂಡಿದೆ.
ಒಂದೆಡೆ, ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದರೆ, ಮತ್ತೊಂದೆಡೆ, 1995 ರಿಂದ ಈವರೆಗೆ ಧರ್ಮಸ್ಥಳ ಔಟ್ ಪೋಸ್ಟ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡಿದವರ ಪಟ್ಟಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಎಸ್ಐಟಿ ಮನವಿ ಮಾಡಿದೆ.
ಇನ್ನು ಸದ್ಯಕ್ಕೆ ಒಂದೇ ಕಡೆ ಸಮಾಧಿ ಅಗೆಯಲು ಎಸ್ಐಟಿ ತಂದ ನಿರ್ಧರಿಸಿದೆ. 30 ಸಿಬ್ಬಂದಿ ಜೊತೆ 20 ಜನ ಪೌರ ಕಾರ್ಮಿಕರಿಂದ ಉತ್ಖನನ ನಡೆಯುತ್ತಿದೆ.
ಇದನ್ನೂ ಓದಿ: Dharmasthala: ಧರ್ಮಸ್ಥಳ: ಉತ್ಪನನ ಸಮಯ ಸೀರೆ ಮತ್ತು ಬ್ಯಾಗ್ ಪತ್ತೆ!
