3
Rajanna Honeytrap Case: ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ಆಗಿದೆ ಎಂದು ರಾಜ್ಯ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆರೋಪ ನಿರಾಧಾರ, ಇದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿ ವಿಚಾರಣೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಪೂರ್ಣಗೊಳಿಸಿದೆ. ಈ ಮೂಲಕ ಹನಿಟ್ರ್ಯಾಪ್ ಯತ್ನ ವಿವಾದ ತಾರ್ಕಿಕ ಅಂತ್ಯ ಕಂಡಿದೆ.
ಈ ಪ್ರಕರಣದ ಕುರಿತು ವಿಚಾರಣೆ ಮಾಡಿದ ಸಿಐಡಿ ಅಧಿಕಾರಿಗಳು ಈ ಆರೋಪದಲ್ಲಿ ಹುರುಳಿಲ್ಲವೆಂದು ಷರಾ ಬರೆದು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
