KSRTC: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಸಾರಿಗೆ ನೌಕರರು ಸರ್ಕಾರದ ವಿರುದ್ಧ ನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ಪ್ರಯಾಣದ ವ್ಯತ್ಯಯ ಉಂಟಾಗಿದೆ. ಬಸ್ ಗಳ ಸಂಖ್ಯೆ ಭಾರಿ ಕಡಿಮೆಯಾಗಿರುವುದರಿಂದ ಪ್ರಯಾಣಿಕರು, ವಿದ್ಯಾರ್ಥಿಗಳು, ಕೆಲಸ ಕಾರ್ಯಗಳಿಗೆ ತೆರಳುವವರು ಪರದಾಟ ನಡೆಸುವಂತಾಗಿದೆ. ಇದರ ನಡುವೆ ಕೆಲವೆಡೆ ಪೊಲೀಸ್ ಭದ್ರತೆಯಲ್ಲಿ ಬಸ್ಗಳ ಸಂಚಾರ ಆರಂಭವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಯಸ್, ಬೆಂಗಳೂರು, ಕಲಬುರಗಿ, ಬೆಳಗಾವಿ ಸೇರಿದಂತೆ ಹಲವೆಡೆ ಸರ್ಕಾರಿ ಬಸ್ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಶುರುವಾಗಿದೆ. ಕೆಲವು ಕಡೆ ಸರ್ಕಾರಿ ಬಸ್ ನಿಲ್ದಾಣಕ್ಕೆ ಖಾಸಗಿ ಬಸ್ ಗಳು ಎಂಟ್ರಿ ಕೊಟ್ಟಿದ್ದು, ವಿವಿಧ ಮಾರ್ಗಗಳಲ್ಲಿ ಸೇವೆ ಆರಂಭಿಸಿವೆ. ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಶುರುವಾಗಿದೆ.
ಇನ್ನು ಬೆಳಗಾವಿ ಬಸ್ ನಿಲ್ದಾಣಕ್ಕೆ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಭೇಟಿ ನೀಡಿದ್ದಾರೆ. ಬಸ್ ಸಂಚಾರದ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಗತ್ಯವಾದರೆ ಪೊಲೀಸ್ ಎಸ್ಕಾರ್ಟ್ ನೀಡಲಾಗುವುದು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ತಿಳಿಸಿದ್ದಾರೆ. ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲಾಡಳಿತ ಜೊತೆಗೆ ಸಭೆ ಮಾಡಿದ ನಂತರ ಖಾಸಗಿ ವಾಹನಗಳ ಬಳಕೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: Whale Death: ದೋಣಿಗೆ ಡಿಕ್ಕಿ ಹೊಡೆದು ತಿಮಿಂಗಿಲ ಸಾವು – Video Viral
