2
Dharmasthala: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಯೂಟ್ಯೂಬರ್ಗಳ ಮೇಲೆ ಹಲ್ಲೆ ನಡೆಸಿ, ಅವರ ಕ್ಯಾಮರಾಗಳಿಗೆ ಹಾನಿ ಮಾಡಿ, ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್ BNS 189(2), 191(2), 115(2), 324(5), 352, 307 190 ಕಲಂ ಅಡಿಯಲ್ಲಿ 15 ರಿಂದ 50 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಹಾಗೂ ಜೀಪು ಚಾಲಕರಾದ ಸೋಮನಾಥ ಸಪಲ್ಯ (50) ಅವರನ್ನು ಧರ್ಮಸ್ಥಳ ಠಾಣೆಯ ಸಬ್ ಇನ್ಸೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಆ.7 ರಂದು ಬಂಧಿಸಿ, ಬಳಿಕ ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದನ್ನೂ ಓದಿ: Kantara : ‘ಕಾಂತಾರ ಚಾಪ್ಟರ್ 1’ ಹೀರೋಯಿನ್ ಹೆಸರು ರಿವೀಲ್ ಮಾಡಿದ ಹೊಂಬಾಳೆ ಫಿಲ್ಮ್ಸ್
