3
Belthangady: ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಸಂದೇಶವನ್ನು ಫೇಸ್ಬುಕ್ನಲ್ಲಿ ಪ್ರಸಾರ ಮಾಡಿರುವ ಕುರಿತು ವಸಂತ ಗಿಳಿಯಾರ್ ವಿರುದ್ಧ ಶೇಖರ ಲಾಯಿಲ ಅವರು ಬೆಳ್ತಂಗಡಿ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.
ವಸಂತ್ ಗಿಳಿಯಾರ್ ಫೇಸ್ಬುಕ್ನಲ್ಲಿ ಹಾಕಿರುವ ಸಂದೇಶ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು, ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿದೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196 (ಎ), 353(2), ಬಿಎನ್ಎಸ್ ನಂತೆ ಪ್ರಕರಣ ದಾಖಲು ಮಾಡಲಾಗಿದೆ.
