Home » Dharmasthala : ಧರ್ಮಸ್ಥಳ ಕುರಿತು ಅಪಪ್ರಚಾರ ಆರೋಪ- ರಾಜ್ಯಾದ್ಯಂತ ಸಿಡಿದೆದ್ದ ಭಕ್ತರು, ಭಾರೀ ಪ್ರತಿಭಟನೆ!!

Dharmasthala : ಧರ್ಮಸ್ಥಳ ಕುರಿತು ಅಪಪ್ರಚಾರ ಆರೋಪ- ರಾಜ್ಯಾದ್ಯಂತ ಸಿಡಿದೆದ್ದ ಭಕ್ತರು, ಭಾರೀ ಪ್ರತಿಭಟನೆ!!

0 comments

Dharmasthala : ದೇಶಾದ್ಯಂತ ಸಂಚಲನ ಸೃಷ್ಟಿಸುತ್ತಿರುವ ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಟ್ಟಿರುವ ಪ್ರಕರಣ ಎಸ್ಐಟಿಯ ಹಿಡಿತದಲ್ಲಿದೆ. ದಿನವು ತನಿಖೆಯು ವಿವಿಧ ಆಯಾಮಗಳಲ್ಲಿ ನಡೆಯುತ್ತಿದೆ. ಆದರೆ ಇದೀಗ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಹಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿ ಧರ್ಮಸ್ಥಳ ಪರ ಭಕ್ತರು ಸೋಮವಾರ ರಾಜ್ಯದ ಹಲವೆಡೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಹೌದು, ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಕ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ರೀತಿ ಅಪಪ್ರಚಾರ ಮಾಡುತ್ತಿರುವವರ ಉದ್ದೇಶವನ್ನು ಬಯಲಿಗೆಳೆಯಬೇಕು. ಅಪಪ್ರಚಾರ ಮಾಡುತ್ತಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಕೊಪ್ಪಳ, ದಾವಣಗೆರೆ, ಕೊಡಗು, ಉಡುಪಿ ಧಾರವಾಡ, ಶಿವಮೊಗ್ಗ, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅಪಪ್ರಚಾರ ನಡೆಸುವ ಮೂಲಕ ಧರ್ಮಸ್ಥ ಕ್ಷೇತ್ರದ ಬಗ್ಗೆ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಆ.24ರಂದು ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ ನಡೆಸಲು ಚಿಂತನೆ ನಡೆದಿದ್ದು. ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸಂಜೆ 4 ಗಂಟೆಗೆ ರಾಜ್ಯದ ಪ್ರಮುಖ ಹಿಂದೂ ನಾಯಕರು, ಧಾರ್ಮಿಕ ಮುಖಂಡರು ಸೇರಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರನ್ನು ಸೇರಿಸಿ ಸಮಾವೇಶ ನಡೆಸಲು ಯೋಜಿಸಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಆ ಮೂಲಕ ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿಯ ವಿರುದ್ದ ಒಗ್ಗಟ್ಟು ಪ್ರದರ್ಶಿಸಲು ಚಿಂತನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Karnataka Gvt: ಗಣೇಶ ಚತುರ್ಥಿ, ಈದ್ ಮಿಲಾದ್ ಆಚರಣೆಗೆ DJ ಬಳಕೆ ನಿಷೇಧ – ಸರ್ಕಾರದಿಂದ ಖಡಕ್ ಆದೇಶ!!

You may also like