Darshan Case: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ದರ್ಶನ್, ಹಾಗೂ ಪವಿತ್ರಗೌಡ ಸೇರಿದಂತೆ ಏಳು ಮಂದಿಗೆ ಜಾಮೀನು ಅರ್ಜಿಯನ್ನು ಸುಪ್ರೀಮ್ ಕೋರ್ಟ್ ರದ್ದು ಪಡಿಸಿದೆ.
ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆರೋಪಿಗಳಿಗೆ ಜಾಮೀನು ನಿರಾಕರಣೆ ಮಾಡಿದೆ. ಸರ್ಕಾರದ ಪರ ವಕೀಲರು ಹಾಗೂ ಆರೋಪಿಗಳ ಪರ ವಕೀಲರು ಲಿಕೀತ ರೂಪದಲ್ಲಿ ಸಲ್ಲಿಸಿದ್ದ ವಾದವನ್ನು ಪರಿಶೀಲಿಸಿದ ಕೋರ್ಟ್ ಬೇಲ್ ನಿರಾಕರಿಸಿ ಆದೇಶ ಹೊರಡಿಸಿದೆ
ದರ್ಶನ್ ಪರ ವಕೀಲರು ನೀಡಿರುವ ಲಿಖಿತ ಕಾರಣಗಳಲ್ಲಿ ದರ್ಶನ್ ಬಂಧನದ ಪ್ರಕ್ರಿಯೆ ಬಗ್ಗೆ ಪ್ರಶ್ನೆ ಮಾಡಲಾಗಿದೆ. ಬೆಂಗಳೂರಿನಲ್ಲಿ FIR ದಾಖಲಿಸಿದ್ರು. ದರ್ಶನ್‌ರನ್ನು ಮೈಸೂರಿನಲ್ಲಿ ಬಂಧಿಸಿದ್ರು. ಬಂಧನಕ್ಕೆ ಕಾರಣವನ್ನು ಸಂಜೆ 6:30 ರವರೆಗೂ ಲಿಖಿತವಾಗಿ ನೀಡಿರುವುದಿಲ್ಲ. ಬಂಧನಕ್ಕೆ ಕಾರಣಗಳನ್ನು ನೀಡದೆ ಇರುವುದು ಕಾನೂನು ಉಲ್ಲಂಘನೆ ಎಂದು ವಾದ ಮಂಡಿಸಿದ್ದರು.
ದರ್ಶನ್ ಅಂಡ್ ಟೀಮ್ ಅನ್ನು ಮತ್ತೆ ಜೈಲಿಗೆ ಅಟ್ಟುವ ಮೂಲಕ ಸುಪ್ರೀಮ್ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿದಿಎ. ಇದೇ ವೇಳೆ ಜೈಲಿನಲ್ಲಿ ದರ್ಶನ್ ಗೂ ಅವರ ಟೀಮ್‌ಗೆ ವಿಶೇಷ ಅತಿಥ್ಯ ನೀಡಿದ ವಿಚಾರವಾಗಿ ತೀವ್ರ ಅಸಮಧಾನ ವ್ಯಕ್ತಪಡಿಸಿದ ನ್ಯಾಯಪೀಠ ಈ ಬಗ್ಗೆ ನ್ಯಾಯಾದೀಶ ಜೆ ಪರ್ದಿವಾಲಾ ಈ ಬಗ್ಗೆ ಹೇಳಿ, ನೀವು ಯಾರಿಗಾದರೂ ವಿಐಪಿ ಅತಿಥ್ಯ ನೀಡಲಾಗುತ್ತಿರುವ ಬಗ್ಗೆ ಛಾಯಾಚಿತ್ರಗಳು ಅಥವಾ ವೀಡಿಯೊವನ್ನು ನಾವು ನೋಡಿದರೆ, ಮೊದಲು ನಿಮ್ಮನ್ನು ಸಮನ್ಸ್ ಮಾಡಲಾಗುತ್ತದೆ ಎಂದು ಜೈಲು ಅಧಿಕಾರಿಗಳಿಗೆ ತಾಕಿತು ಮಾಡಿದರು. ಅಲ್ಲದೆ ನ್ಯಾಯಾದೀಶರು ಈ ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್‌ಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವಂತೆ ರಿಜಿಸ್ಟ್ರಿಗೆ ನಿರ್ದೇಶನ ನೀಡಿದ್ದಾರೆ.
Dharmasthala : ಧರ್ಮಸ್ಥಳದಲ್ಲಿ ಹೂತಿಟ್ಟ ಹೆಣಗಳ ತನಿಖಾ ವರದಿ ಸಿದ್ದ – ಏನಿದೆ ಅದರಲ್ಲಿ?
