Vice President : ಉಪರಾಷ್ಟ್ರಪತಿ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಬಾರಿ ಕುತೂಹಲಕ್ಕೆ ಈಗ ತೆರೆ ಬಿದ್ದಿದ್ದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದ ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಘೋಷಿಸಿದೆ.
ಹೌದು, ಉಪರಾಷ್ಟ್ರಪತಿ ಚುನಾವಣೆಗೆ ಪಕ್ಷದ ಆಯ್ಕೆಯನ್ನು ಅಂತಿಮಗೊಳಿಸಲು ಕರೆಯಲಾಗಿದ್ದ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತೀಯ ಜನತಾ ಪಕ್ಷ(BJP) ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್(CP Radhakrishnan) ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ನಿರ್ಧಾರವನ್ನು ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದ್ದು, ಪಕ್ಷದ ಅದ್ಯಕ್ಷ ಜೆಪಿ ನಡ್ಡಾ ಅವರು ಹೆಸರನ್ನು ಪ್ರಕಟಿಸಿದ್ದಾರೆ.
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಗಮನಸೆಳೆದಿದ್ದ ಸಿಪಿ ರಾಧಾಕೃಷ್ಣನ್ ಬಳಿಕ ಕೊಯಂಬತ್ತೂರಿನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ರಾಜಕೀಯ ಜೀವನದ ನಿಸ್ವಾರ್ಥ ಸೇವೆ ಸಲ್ಲಿಸಿದ ಸಿಪಿ ರಾಧಕೃಷ್ಣನ್ ಅವರನ್ನು ಬಿಜೆಪಿ ರಾಜ್ಯಾಪಾಲರಾಗಿ ನೇಮಕ ಮಾಡಿತ್ತು. ಪುದುಚೇರಿ, ಜಾರ್ಖಂಡ್ ಹಾಗೂ ಸದ್ಯ ಮಹಾರಾಷ್ಟ್ರ ಗವರ್ನರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮಿಳುನಾಡು ಮೂಲದ ರಾಧಾಕೃಷ್ಣನ್ ಅಭ್ಯರ್ಥಿ ಘೋಷಣೆ ಹಿಂದೆ ತಮಿಳುನಾಡು ಚುನಾವಣೆ ರಣತಂತ್ರವೂ ಅಡಗಿದೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಸಿಪಿ ರಾಧಾೃಷ್ಣನ್ ತಮ್ಮ 16ನೇ ವಯಸ್ಸಿನಿಂದ ಆರ್‌ಎಸ್‌ಎಸ್ ಸ್ವಯಂ ಸೇವಕರಾಗಿದ್ದಾರೆ. ಇದೀಗ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇನ್ನು ತಮಿಳುನಾಡು ಮೂಲದ ಸಿಪಿ ರಾಧಕೃಷ್ಣನ್ ಹೆಸರು ಘೋಷಣೆಗೆ ಎನ್‌ಡಿಎ ಮಿತ್ರಪಕ್ಷಗಳು ಬೆಂಬಲ ಸೂಚಿಸಿದೆ.
