5
Manipal : ಮಣಿಪಾಲ ಈಶ್ವನಗರದ ಡೌನ್ ಟೌನ್ ಬಾರ್ ಆಯಂಡ್ ರೆಸ್ಟೋರೆಂಟ್ ನ ಪಾಲುದಾರ ಕಾರ್ಕಳ ಬೈಲೂರಿನ ನಿವಾಸಿ ಕೃಷ್ಣರಾಜ್ ಹೆಗ್ಡೆ (45)ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಉಡುಪಿ- ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಇವರು ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಬೈಲೂರು – ಕೌಡೂರು ಮಾರಿಯಮ್ಮ ದೇವಸ್ಥಾನದ ನಾಯರ್ಬೆಟ್ಟು ಧಾರ್ಮಿಕ ಸೇವಾ ಸಮಿತಿಯ ಕಾರ್ಯದರ್ಶಿಯಾಗಿದ್ದ ಕೃಷ್ಣರಾಜ ಹೆಗ್ಡೆ ಅವರು ಉಡುಪಿ ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸಿಕೊಂಡಿದ್ದು, ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹಿರಿಯಡ್ಕ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
