Home » Kota Srinivasa Poojary: ಧರ್ಮಸ್ಥಳ ಅಪಪ್ರಚಾರ: ಇ.ಡಿ. ತನಿಖೆಗೆ ಒತ್ತಾಯಿಸಿ ಅಮಿತ್‌ ಶಾ ಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪತ್ರ

Kota Srinivasa Poojary: ಧರ್ಮಸ್ಥಳ ಅಪಪ್ರಚಾರ: ಇ.ಡಿ. ತನಿಖೆಗೆ ಒತ್ತಾಯಿಸಿ ಅಮಿತ್‌ ಶಾ ಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪತ್ರ

0 comments

Kota Srinivasa Poojary: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಪಾವಿತ್ರ್ಯಕ್ಕೆ ಮಸಿ ಬಳಿಯಲಾಗುತ್ತಿದೆ ಎಂದು ಆರೊಪ ಮಾಡಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೆಲ ವ್ಯಕ್ತಿಗಳಿಗೆ ಹರಿದು ಬರುತ್ತಿರುವ ವಿದೇಶಿ ಹಣದ ಕುರಿತು ಇಡಿ ತನಿಖೆ ಮಾಡುವಂತೆ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದು ಆಗ್ರಹ ಮಾಡಿದ್ದಾರೆ.

ಕೋಟ್ಯಾಂತರ ಹಿಂದೂಗಳ ಆರಾಧ್ಯ ತಾಣ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಿಗೆ ಯೂಟ್ಯೂಬರ್ಸ್ ಸಹಿತ ಅನೇಕರಿಗೆ ವಿದೇಶಿ ಹಣ ಬಂದಿರುವ ಆರೋಪಗಳಿವೆ. ರಾಜ್ಯದ ಪ್ರತಿಷ್ಠಿತ ಮಾಧ್ಯಮಗಳೂ ಈ ಬಗ್ಗೆ ವರದಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಇದರ ಸತ್ಯಾಸತ್ಯತೆಯನ್ನು ತಿಳಿಯಲು ಕೂಡಲೇ ಇಡಿ ತನಿಖೆಗೆ ಆದೇಶಿಸುವಂತೆ ಕೇಂದ್ರದ ಗೌರವಾನ್ವಿತ ಗೃಹ ಸಚಿವರಾದ ಶ್ರೀ ಅಮಿತ್ ಶಾ ರವರಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ.

ಶ್ರೀ ಕ್ಷೇತ್ರದ ವಿರುದ್ಧ ಷಡ್ಯಂತ್ರವಿದೆ ಎಂಬುದನ್ನು ಸ್ವತಃ ಡಿಸಿಎಂ ಡಿಕೆ ಶಿವಕುಮಾ‌ರ್ ಹಾಗೂ ಇದರ ಹಿಂದೆ ಎಡಪಂಥೀಯರ ಒತ್ತಡ ಇದೆ ಎಂಬುದನ್ನು ಸಚಿವ ದಿನೇಶ್‌ ಗುಂಡೂರಾವ್‌ರವರೂ ಹೇಳಿರುವುದು ಗಮನಾರ್ಹ. ಹೀಗಾಗಿ ಅಸಂಖ್ಯ ಭಕ್ತರ ಆಗ್ರಹವನ್ನು ನಾನು ಮಾನ್ಯ ಗೃಹ ಸಚಿವರಿಗೆ ಮನವಿಯ ಮೂಲಕ ತಿಳಿಸಿದ್ದೇನೆ. ಇಡಿ ತನಿಖೆ ನಡೆಸಿ ಸತ್ಯ ಹೊರಗೆ ಬರಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಬರೆದಿದ್ದಾರೆ.

Virendra Heggade: ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಆರೋಪ: ಡಾ.ಡಿ.ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

You may also like