6
Mangalore: ಮಂಗಳೂರು (Mangalore)ಕೊಣಾಜೆಯ ಅಸೈಗೋಳಿಯಲ್ಲಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ (ಕೆಎಸ್ಆರ್ಪಿ) ಹೆಡ್ಕಾನ್ಸ್ಟೆಬಲ್ ಆಗಿರುವ ಉತ್ತರ ಕರ್ನಾಟಕದ ಮೂಲದ ಸಂಜೀವ (38) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಇವರ ಪತ್ನಿ ಮತ್ತು ಮಕ್ಕಳು ಊರಿಗೆ ಹೋಗಿದ್ದಾಗ ಸೋಮವಾರ ತಾವು ವಾಸವಾಗಿದ್ದ ಕ್ವಾರ್ಟಸ್ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
