Home » Agricultural: ಕೃಷಿ ಪಂಡಿತ ಪ್ರಶಸ್ತಿ : ಅರ್ಜಿ ಆಹ್ವಾನ!

Agricultural: ಕೃಷಿ ಪಂಡಿತ ಪ್ರಶಸ್ತಿ : ಅರ್ಜಿ ಆಹ್ವಾನ!

0 comments

Agricultural: ಕೃಷಿ (Agricultural) ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ, ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ವಿನೂತನ / ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಕೃಷಿ ಪಂಡಿತ ಪ್ರಶಸ್ತಿಗೆ ಕೆ-ಕಿಸಾನ್ ಪೋರ್ಟಲ್‌ನಡಿ ಆರ್.ಎಸ್.ಕೆ ಲಾಗಿನ್ ಅಥವಾ ಸಿಟಿಜನ್ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ ಅಥವಾ ಸ್ವತಃ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿ ಯನ್ನು ಬಳಸಿಕೊಂಡು ಆನ್‌ಲೈನ್ ಮೂಲಕ ಆಗಸ್ಟ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Sukanya Scheme: ಸುಕನ್ಯಾ ಯೋಜನೆ: ಪೋಷಕರು ಎಷ್ಟು ಹೆಣ್ಣು ಮಕ್ಕಳ ಖಾತೆಯನ್ನು ತೆರೆಯಬಹುದು? ಬಡ್ಡಿದರ ಎಷ್ಟಿದೆ?

You may also like