Property registration: ರಾಜ್ಯ ಸರ್ಕಾರವು ಮುಂದ್ರಾಕ ನೋಂದಣಿ ಶುಲ್ಕವನ್ನು ಶೇ.1ರಿಂದ 2ಕ್ಕೆ ಪರಿಷ್ಕರಿಸಿದ್ದು, ಪರಿಷ್ಕೃತ ಶುಲ್ಕವು ಸೆ.31ರಿಂದ ಜಾರಿಗೆ ಬರಲಿದೆ. ಪರಿಷ್ಕೃತ ನೋಂದಣೆ ಶುಲ್ಕವನ್ನು ಸುಗಮವಾಗಿ ಕಾವೇರಿ ತಂತ್ರಾಂಶದ ಮೂಲಕ ಪಾವತಿಸಲು ಇಲಾಖೆಯು ಅರ್ಜಿದಾರರಿಗಾಗಿ ಕೆಲ ಮಾರ್ಗಸೂಚಿಗಳನ್ನು ನೀಡಿದೆ.
ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ಅಪಾಯಿಂಟ್ ಮೆಂಟ್ ಪಡೆದಿರುವವರು ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಪಾವತಿಸಬೇಕು. ಅರ್ಜಿದಾರರಿಗೆ ಎಸ್‌ಎಂಎಸ್ ಸಂದೇಶವನ್ನು ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.
ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಿ, ಪರಿಷ್ಕೃತ ಶೇ.2ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರನ್ನು ತಿಳಿಸಲಾಗುವುದು ಎಂದಿದ್ದಾರೆ.
ಇಲಾಖೆಯ ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ಪೋರ್ಟಲ್ ನಲ್ಲಿ ಲಭ್ಯವಿದೆ ಎಂದು ಮುಂದ್ರಾಕಗಳ ಆಯುಕ್ತರ ಕಚೇರಿಯ ನೋಂದಣಿ ಮಹಾಪರಿವೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೀಗ ನೋಂದಣಿ ಶುಲ್ಕ ದುಪ್ಪಟ್ಟಾಗಿರುವುದರಿಂದ ಆಸ್ತಿಯ ಮಾರುಕಟ್ಟೆ ಬೆಲೆಯ ಶೇ.7.6 ರಷ್ಟನ್ನು ನೋಂದಣಿ ಮತ್ತು ಮುದ್ರಾಂಕ ಶುಲ್ಕಕ್ಕೆ ಭರಿಸಬೇಕಾದ ಅನಿವಾರ್ಯತೆ ಉಂಟಾಗಲಿದೆ. ಈ ಬಗ್ಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದ್ದು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಎಲ್ಲಾ ಉಪ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಿದೆ. ಇದರನ್ವಯ ಆ.31 ರಿಂದಲೇ ಅನ್ವಯವಾಗುವಂತೆ ನೋಂದಣಿ ಶುಲ್ಕ ಹೆಚ್ಚಳ ಮಾಡಲಾಗಿದೆ.
Technology: ಮಳೆಗಾಲದಲ್ಲಿ ಮೊಬೈಲ್ ಒದ್ದೆಯಾದರೆ ಏನು ಮಾಡಬೇಕು?
