Home » CM Siddaramaiah: ‘ಸೌಜನ್ಯ ಕೇಸ್‌ʼ ಮೇಲ್ಮನವಿಗೆ ಸೂಕ್ತವಾಗಿದೆಯೇ ಎನ್ನುವುದನ್ನು ಸೌಜನ್ಯ ತಾಯಿ ನಿರ್ಧರಿಸಬೇಕು- ಸಿಎಂ

CM Siddaramaiah: ‘ಸೌಜನ್ಯ ಕೇಸ್‌ʼ ಮೇಲ್ಮನವಿಗೆ ಸೂಕ್ತವಾಗಿದೆಯೇ ಎನ್ನುವುದನ್ನು ಸೌಜನ್ಯ ತಾಯಿ ನಿರ್ಧರಿಸಬೇಕು- ಸಿಎಂ

0 comments
CM Siddaramaiah

CM Siddaramaiah: ಧರ್ಮಸ್ಥಳದ ಸೌಜನ್ಯ ಕೇಸ್‌ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

“ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆ ಮಾಡಿದೆ. ಈಗ ಸುಪ್ರೀಂ ಕೋರ್ಟಿನ ವೆಚ್ಚ ಭರಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳುತ್ತಿದ್ದಾರೆ. ಪ್ರಕರಣ ಮೇಲ್ಮನವಿಗೆ ಸೂಕ್ತವಾಗಿದೆಯೇ ಎಂಬುದನ್ನು ಸೌಜನ್ಯ ತಾಯಿ ನಿರ್ಧರಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು.

ಧರ್ಮಸ್ಥಳಕ್ಕೆ ಬಿಜೆಪಿ ಮಾಡಿದ ಯಾತ್ರೆ ರಾಜಕೀಯ ಪ್ರೇರಿತ. ನಿಜವಾಗಿ ಅದು ಧರ್ಮಸ್ಥಳ ಚಲೋ ಅಲ್ಲ, “ರಾಜಕೀಯ ನಾಟಕ”ದಂತಿತ್ತು.

 

You may also like