Home » Asia Cup T20 Cricket: ಇಂದಿನಿಂದ ಏಷ್ಯಾಕಪ್‌: 19 ಪಂದ್ಯಗಳಲ್ಲಿ 8 ದೇಶಗಳ ಸೆಣಸಾಟ!

Asia Cup T20 Cricket: ಇಂದಿನಿಂದ ಏಷ್ಯಾಕಪ್‌: 19 ಪಂದ್ಯಗಳಲ್ಲಿ 8 ದೇಶಗಳ ಸೆಣಸಾಟ!

0 comments

Asia Cup T20 Cricket: ಏಷ್ಯಾ ಕಪ್‌ ಟಿ20 ಕ್ರಿಕೆಟ್‌ (Asia Cup T20 Cricket) ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಯುಎಇ (UAE) ದೇಶದ ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು ಆಡಲಿವೆ.

ಉದ್ಘಾಟನಾ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಕಾಂಗ್‌ ಮಧ್ಯೆ ನಡೆದರೆ ಸೆ.28ರಂದು ಫೈನಲ್‌ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್‌ ಭಾರತ (India) ಬುಧವಾರ ಯುಎಇ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ.

ತಂಡಗಳನ್ನು 2 ಗುಂಪುಗಳನ್ನಾಗಿ ವಿಂಗಡಿಸಲಾಗಿದ್ದು ಭಾರತ, ಪಾಕಿಸ್ತಾನ, ಯುಎಇ ಹಾಗೂ ಒಮಾನ್‌ ‘ಎ’ ಗುಂಪಿನಲ್ಲಿವೆ. ಅಫ್ಘಾನಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಹಾಂಕಾಂಗ್‌ ‘ಬಿ’ ಗುಂಪಿನಲ್ಲಿವೆ.

ಪ್ರತಿ ತಂಡಗಳು ಗುಂಪು ಹಂತದಲ್ಲಿ ಒಮ್ಮೆ ಪರಸ್ಪರ ಸೆಣಸಾಡಲಿವೆ. ಗುಂಪಿನ ಅಗ್ರ-2 ತಂಡಗಳು ಸೂಪರ್‌-4 ಹಂತ ಪ್ರವೇಶಿಸಲಿವೆ. ಸೂಪರ್‌-4ನಲ್ಲಿ ಅಗ್ರ-2 ಸ್ಥಾನ ಪಡೆದ ತಂಡಗಳು ಫೈನಲ್‌ಗೆ ಅರ್ಹತೆ ಪಡೆಯಲಿವೆ.

ಇದನ್ನೂ ಓದಿ:Kantara Chapter 1: “ಕಾಂತಾರ ಚಾಪ್ಟರ್ 1 ” ವಿಶ್ವದಾದ್ಯಂತ ಬಿಡುಗಡೆಗೆ ಸಿದ್ಧ

ದುಬೈ ಕ್ರೀಡಾಂಗಣದಲ್ಲಿ 11 ಪಂದ್ಯ ನಡೆಯಲಿದ್ದು 25,000 ಆಸನ ಸಾಮರ್ಥ್ಯವನ್ನು ಹೊಂದಿದರೆ ಅಬುಧಾಬಿಯಲ್ಲಿ 8 ಪಂದ್ಯಗಳು ನಿಗದಿಯಾಗಿದ್ದು 20,000 ಆಸನ ಸಾಮರ್ಥ್ಯ ಹೊಂದಿದೆ.

You may also like