Democracy: ಸೆಪ್ಟೆಂಬರ್.15 ರಂದು ರಾಜ್ಯಾಧ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ (Democracy) ದಿನಾಚರಣೆ ಆಚರಿಸುವ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದೆ.
ಈ ಹಿನ್ನಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB), ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (ಕೆಎಂಎಫ್), ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್), ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್ಟಿಡಿಸಿ), ಕರ್ನಾಟಕ ರಾಜ್ಯ ರೇಷ್ಮೆ ನಿಗಮ ನಿಯಮಿತ(ಕೆಎಸ್ಐಸಿ)ಗಳ ಸಹಭಾಗಿತ್ವದಲ್ಲಿ “ನನ್ನ ಮತ ನನ್ನ ಹಕ್ಕು” (My Vote My Right) ಎಂಬ ಧೇಯ ವಾಕ್ಯದೊಂದಿಗೆ ರಾಜ್ಯ/ಜಿಲ್ಲಾ ಮಟ್ಟದಲ್ಲಿ ದಿನಾಂಕ:15-09-2025ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲು ಉದ್ದೇಶಿಸಲಾಗಿದೆ.
ಮೇಲ್ಕಂಡ ಅಂಶಗಳ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಪುಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ರಾಜ್ಯ/ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿ ಕೈಗೊಳ್ಳಬೇಕಾಗಿರುವ ವಿವಿಧ ಚಟುವಟಿಕೆಗಳ ಕುರಿತು ಸೂಕ್ತ ನಿರ್ದೇಶನ ನೀಡಲು ನಿರ್ಧರಿಸಿ, ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.

