CM Siddaramiah :ಕುರುಬಸಮುದಾಯವನ್ನು ST ಗೆಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಹೌದು, ಕರ್ನಾಟಕ ರಾಜ್ಯ ಕುರುಬಗೊಂಡ ಸಂಘ ಮತ್ತು ಸಂಗೊಳ್ಳಿ ರಾಯಣ್ಣ ಯುವಕ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಯಣ್ಣ ಅವರ ಮೂರ್ತಿ ಅನಾವರಣಗೊಳಿಸಿ, ನಗರ ಸಿಟಿ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣರ ಹೆಸರು ನಾಮಕರಣ ಮಾಡಿ ಮಾತನಾಡಿದ ಅವರು ಹಿಂದಿನ ನನ್ನ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕುರುಬ ಸಮಾಜವನ್ನು ಎಸ್ ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು . ಕೆಲವು ತಾಂತ್ರಿಕ ತೊಂದರೆಯಿಂದಾಗಿ ಕಡತ ಹಿಂದಕ್ಕೆ ಬಂದಿತ್ತು . ಈಗ ಕೆಲವು ಸ್ಪಷ್ಟೀಕರಣ ಕೇಳಿದ್ದು , ಸರಿ ಮಾಡಿ ಪುನಃ ಈಗ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಲ್ಲದೆ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯಾದ್ಯಂತ ನಡೆಯಲಿರುವ ಜಾತಿ ಸಮೀಕ್ಷೆಯ ಮಹತ್ವವನ್ನು ಒತ್ತಿ ಹೇಳಿದ ಮುಖ್ಯಮಂತ್ರಿಗಳು, ‘ಸಮೀಕ್ಷೆಯ ಸಂದರ್ಭದಲ್ಲಿ ಕುರುಬ ಸಮುದಾಯದವರು ತಮ್ಮ ಜಾತಿಯನ್ನು ‘ಕುರುಬ’ ಎಂದು ಸ್ಪಷ್ಟವಾಗಿ ನಮೂದಿಸಬೇಕು. ಆಗ ಮಾತ್ರ ನಮ್ಮ ಸಮಾಜದ ನಿಖರವಾದ ಸ್ಥಿತಿಗತಿಗಳು, ಜನಸಂಖ್ಯೆ ಮತ್ತು ಸಾಮಾಜಿಕ-ಶೈಕ್ಷಣಿಕ ಹಿನ್ನಡೆಯ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಈ ಅಂಕಿ-ಅಂಶಗಳು ಸಮುದಾಯಕ್ಕೆ ಸಿಗಬೇಕಾದ ಸಾಮಾಜಿಕ ಸೌಲಭ್ಯಗಳನ್ನು ಒದಗಿಸಲು klಳ್ಳಲು ನಿರ್ಣಾಯಕವಾಗಲಿವೆ,’ ಎಂದು ಕರೆ ನೀಡಿದರು.
