9
Employees: ಇನ್ಮುಂದೆ ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು (Employees) ಮುಂಬಡ್ತಿ ಹೊಂದಲು ಬಯಸಿದಲ್ಲಿ ಅವರು ಹುದ್ದೆಗೆ ಅಗತ್ಯವಾದ ತರಬೇತಿ ಪಡೆಯುವುದನ್ನು ಕಡ್ಡಾಯ ಎಂದು ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.
ಈ ಕುರಿತು ಕಾನೂನು ಸಚಿವ ಎಚ್.ಕೆ. ಪಾಟೀಲ್ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ್ದು, ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ವಿವಿಧ ಇಲಾಖೆಗಳ ಉನ್ನತ ಹುದ್ದೆಗಳಿಗೆ ಕಂಪ್ಯೂಟರ್, ತಂತ್ರಾಂಶ, ಸಾಫ್ಟ್ ಸ್ಕಿಲ್ಸ್ ಸೇರಿ ಹಲವು ತರಬೇತಿ ಅಗತ್ಯ ಇರುತ್ತೆ. ಇಂತಹ ತರಬೇತಿ ಪಡೆಯದಿದ್ದರೆ ಮುಂಬಡ್ತಿಗೆ ಅವಕಾಶವಿಲ್ಲ ಎಂದು ಸಂಪುಟ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
