13
BBK 12: ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತ ಕಾರ್ಯನಿರ್ವಹಿಸಿದ ಆರೋಪದಲ್ಲಿ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಸೀಸನ್ 12 ನಡೆಯುತ್ತಿರುವ ಬಿಡದಿಯ ಸ್ಟುಡಿಯೋಸ್ಗೆ ಬೀಗ ಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಜೆ 7 ಗಂಟೆಯೊಳಗೆ ಎಲ್ಲ ಬಿಗ್ಬಾಸ್ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:Dasara Holiday: ಪೋಷಕರೇ ಗಮನಿಸಿ – ಎಲ್ಲಾ ಶಾಲಾ ಮಕ್ಕಳಿಗೆ ವಿಸ್ತರಣೆಯಾಗಿಲ್ಲ ದಸರಾ ರಜೆ
ಕೆಎಸ್ಪಿಸಿಬಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸ್ಟುಡಿಯೋಗೆ ಬಂದಿದ್ದು, ಸಂಜೆ 7 ಗಂಟೆಯೊಳಗೆ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.
