7
Land Record: ಇನ್ನು ಕಂದಾಯ ಇಲಾಖೆಯು ಕರ್ನಾಟಕದ ಜನರಿಗೆ ಪ್ರತಿ ಹಳ್ಳಿಯ ಕಂದಾಯ ನಕ್ಷೆಯನ್ನು (Land Record) ಆನ್ ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ನೀವು https://landrecords.karnataka.gov.in/service3/ ಗೆ ಭೇಟಿ ನೀಡಿ.
ಈ ಹಂತ ಅನುಸರಿಸಿ, ಕುಳಿತಲ್ಲೇ ಕಂದಾಯ ನಕ್ಷೆ ಡೌನ್ ಲೋಡ್ ಮಾಡಿ.
ಮೊದಲು https://landrecords.karnataka.gov.in/service3/ ಈ ಲಿಂಕ್ ಕ್ಲಿಕ್ ಮಾಡಿ, ಕಂದಾಯ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಈ ಮೇಲ್ಕಂಡ ಲಿಂಕ್ ಕ್ಲಿಕ್ ಮಾಡಿದ ನಂತ್ರ ನಿಮಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಆಯ್ಕೆಯನ್ನು ತೋರಿಸುತ್ತದೆ ಅದನ್ನು ಆಯ್ಕೆ ಮಾಡಿಕೊಳ್ಳಿ. ನಂತರ ನಿಮ್ಮ ಹೋಬಳಿಯ ಸಂಪೂರ್ಣ ಹಳ್ಳಿಗಳ ಕಂದಾಯ ನಕ್ಷೆಯನ್ನು ಪಿಡಿಎಫ್ ಪಾರ್ಮೆಟ್ ನಲ್ಲಿ ತೋರಿಸಲಿದೆ.
ನೀವು ನಿಮಗೆ ಬೇಕಾದ ಹಳ್ಳಿಯ ಕಂದಾಯ ನಕ್ಷೆಯನ್ನು ಪಕ್ಕದಲ್ಲಿ ಕಾಣುವಂತ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
