9
Ayodhya: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗಿರುವ ರಾಮಮಂದಿರದ (Ram Mandir) ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಅವರು ರಾಮಮಂದಿರದ ಮೇಲ್ಭಾಗದಲ್ಲಿ ಧ್ವಜಾರೋಹಣ ನಡೆಸಲಿದ್ದಾರೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಧಾರ್ಮಿಕ ಸಮಿತಿಯ ಸದಸ್ಯರ ಮಹತ್ವದ ಸಭೆ ಜಾನಕಿ ಘಾಟ್‌ನ ವೈದೇಹಿ ಭವನದಲ್ಲಿ, ಈ ಬಗ್ಗೆ ಚರ್ಚಿಸಲಾಗಿದೆ.
191 ಅಡಿ ಎತ್ತರದ ರಾಮಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲು ನಿರ್ಧರಿಸಿದೆ.
