Home » Education: ಅನುದಾನಿತ ಶಾಲೆಗಳಿಗೂ ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ; ಸಚಿವ ಮಧು ಬಂಗಾರಪ್ಪ

Education: ಅನುದಾನಿತ ಶಾಲೆಗಳಿಗೂ ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ; ಸಚಿವ ಮಧು ಬಂಗಾರಪ್ಪ

0 comments

Education: “ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಲಾಗಿದೆ” ಎಂದು ಶಾಲಾ ಶಿಕ್ಷಣ (Education) ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದರು.

“ಅನುದಾನಿತ ಶಾಲೆಗಳ 6 ಸಾವಿರ ಹಾಗೂ ಸರ್ಕಾರಿ ಶಾಲೆಗಳ 12 ಸಾವಿರ ಸೇರಿದಂತೆ 18 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರ ಅಧಿಸೂಚನೆ ಹೊರಡಿಸಲಾಗುತ್ತಿದೆ. ಅದರ ಹೊರತಾಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಉಳಿಯುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಆಯಾ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಬಹುಶಃ ಅನುದಾನಿತ ಶಾಲೆಗಳಿಗೆ 4ರಿಂದ 5 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಕಾಗುತ್ತದೆ. ಅವರಿಗೆ ಗೌರವಧನ ಸರ್ಕಾರದಿಂದಲೇ ಪಾವತಿಸಲಾಗುವುದು. ಕನ್ನಡ ಮಾಧ್ಯಮದ ಶಾಲೆಗಳ ಉಳಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ” ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಇದನ್ನೂ ಓದಿ:Karnataka: ಕರ್ನಾಟಕದ ಈ ಜಿಲ್ಲೆಗಳಲ್ಲಿ `ಪ್ರಧಾನಿ ಧನಧಾನ್ಯ’ ಯೋಜನೆ ಜಾರಿ

You may also like