Home » Ration Card: BPL, ಅಂತ್ಯೋದಯ ಕಾರ್ಡ್‌ದಾರರಿಗೆ ಸಿಹಿ ಸುದ್ದಿ

Ration Card: BPL, ಅಂತ್ಯೋದಯ ಕಾರ್ಡ್‌ದಾರರಿಗೆ ಸಿಹಿ ಸುದ್ದಿ

0 comments
Ration Card

BPL Card: ಸಾರ್ವಜನಿಕ ವಿತರಣಾ ಪದ್ಧತಿಯಡಿ ಬಿಪಿಎಲ್‌, ಅಂತ್ಯೋದಯ ಪಡಿತರ ಚೀಟಿ ಫಲಾನುಭವಿಗಳಿಗೆ ಅಕ್ಟೋಬರ್‌ ತಿಂಗಳಿನಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಪಡಿತರ ಧಾನ್ಯ ಬಿಡುವಡೆ ಮಾಡಲಾಗಿದೆ.

ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 35 ಕೆಜಿ ಅಕ್ಕ ಹಾಗೂ ಪಿ.ಹೆಚ್‌.ಹೆಚ್‌ ಪ್ರತಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಮತ್ತು ರಾಜ್ಯ ಸರಕಾರದ ವತಿಯಿಂದ ಪ್ರತಿ ಸದಸ್ಯರಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ.

ಅಕ್ಟೋಬರ್‌ ತಿಂಗಳ ಕೊನೆಯವರೆಗೆ ಪ್ರತಿದಿನ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳನ್ನು ತೆರೆದು ಸರಿಯಾದ ಪ್ರಮಾಣದಲ್ಲಿ ಪಡಿತರ ವಿತರಣೆ ಮಾಡಬೇಕು. ಒಂದು ವೇಳೆ ಲೋಪ ದೋಪ ಕಂಡು ಬಂದಲ್ಲಿ ನ್ಯಾಯಬೆಲೆ ಅಂಗಡಿಯವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹ ಪಡಿತರ ರದ್ದು ಪಡಿಸಲಾಗುವುದು.

ಪಡಿತರ ವಿತರಣೆಯ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಪೊಲೀಸ್‌ ಇಲಾಖೆ ಸಹಾಯವಾಣಿ 112, 9480802900, ಬಾಗಲಕೋಟೆ ಆಹಾರ ಇಲಾಖೆ ಸಹಾಯವಾಣಿ 1967, ದೂರವಾಣಿ ಸಂಖ್ಯೆ 08354 235094ಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.

You may also like