Home » Bangalore: ಕಟ್ಟಡಗಳ ‘OC’ ವಿನಾಯಿತಿಗೆ ಈ ಷರತ್ತು ಅನ್ವಯ

Bangalore: ಕಟ್ಟಡಗಳ ‘OC’ ವಿನಾಯಿತಿಗೆ ಈ ಷರತ್ತು ಅನ್ವಯ

by ಹೊಸಕನ್ನಡ
0 comments

Bangalore: ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟೀಲ್ಸ್ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (OC)ದಿಂದ ವಿನಾಯಿತಿ ನೀಡಲು ಸಚಿವ ಸಂಪುಟ ನಿರ್ಧಾರ ಮಾಡಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಇತರೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು ಎರಡಂತಸ್ತು, ಸ್ಟಿಲ್ಟ್ ಮತ್ತು ಮೂರಂತಸ್ತಿನ ವಸತಿ ಕಟ್ಟಡಗಳಿಗೆ ಮಾತ್ರ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಲು ಸಂಪುಟ ನಿರ್ಧಾರ ಮಾಡಿದೆ.

ಗ್ರೇಟರ್ ಬೆಂಗಳೂರು (Bangalore) ವ್ಯಾಪ್ತಿ ಯಲ್ಲಿ (GBA) 1,200 ಚದರಡಿ ವಿಸ್ತೀರ್ಣದ ವರೆಗೆ ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟೀಲ್ಸ್ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆಧಿಕೃತ ಆದೇಶ ಹೊರಡಿಸಿದೆ.

You may also like