11
Ration: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಕಾರ್ಡ್ ದಾರರಿಗೆ ಮುಂದಿನ ತಿಂಗಳಿನಿಂದ ಎಣ್ಣೆ, ಬೇಳೆ ಕಾಳುಗಳನ್ನು ವಿತರಿಸಲಾಗುವುದು ಎಂದು ಆಹಾರ ನಾಗರಿಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದರು. ಇದರ ಬೆನ್ನಲ್ಲಿ ಮುನಿಯಪ್ಪ ಅವರು ಇನ್ನು ಮುಂದೆ ಪ್ರತಿ ತಿಂಗಳು 10 ನೇ ತಾರೀಖಿನಂದು ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಹೌದು, ಇನ್ನು ಮುಂದೆ ರಾಜ್ಯದ ಎಲ್ಲಾ ಪಡಿತರ ಅಂಗಡಿಗಳಲ್ಲಿ 10ನೇ ತಾರೀಖಿನಂದು ಪಡಿತರ ಬಿಡುಗಡೆಗೊಳಿಸಲಾಗುವುದು ಎಂದು ಸಚಿವ ಮುನಿಯಪ್ಪ ಅವರು ತಿಳಿಸಿದ್ದಾರೆ.
ಅಲ್ಲದೆ ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಪಡಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಆದಾಯ ತೆರಿಗೆ ಕಟ್ಟುವವರಿಗೆ ಮತ್ತು ಸ್ವಂತ ಕಾರು ಇದ್ದು ಬಿಪಿಎಲ್ ಕಾರ್ಡ್ ಪಡೆದವರ ಕಾರ್ಡ್ ಗಳನ್ನು ಅನರ್ಹಗೊಳಿಸಲಾಗುವುದು. ಅವರಿಗೆ ಎಪಿಎಲ್ ಕಾರ್ಡನ್ನು ನೀಡಲಾಗುವುದು ಎಂದು ಮುನಿಯಪ್ಪ ಹೇಳಿದ್ದಾರೆ.
