PM Kisan: ದೇಶಾದ್ಯಂತ 10 ಕೋಟಿಗೂ ಹೆಚ್ಚು ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (PM Kisan) 21 ನೇ ಕಂತಿಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಇದೀಗ ಬಿಹಾರ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ನವೆಂಬರ್ ಮೊದಲ ವಾರದಲ್ಲಿ ಸರ್ಕಾರ ಮುಂದಿನ ಕಂತನ್ನು ಬಿಡುಗಡೆ ಮಾಡಲಿದೆ ಎಂದು ವರದಿಗಳು ತಿಳಿಸಿವೆ.
21 ನೇ ಕಂತು ಯಾವಾಗ ಬರಬಹುದು?
ವಿವಿಧ ವರದಿಗಳ ಪ್ರಕಾರ, ಕೇಂದ್ರ ಸರ್ಕಾರವು ನವೆಂಬರ್ ಮೊದಲ ವಾರದಲ್ಲಿ 21 ನೇ ಕಂತನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ (ನವೆಂಬರ್ 6) ಕೆಲವು ದಿನಗಳ ಮೊದಲು ಈ ಘೋಷಣೆ ಬರಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.
ಇನ್ನು “ಮುಂದಿನ ಕಂತಿನ 2,000 ರೂ.ಗಳನ್ನು ಶೀಘ್ರದಲ್ಲೇ ಅರ್ಹ ರೈತರ ಖಾತೆಗಳಿಗೆ ಜಮಾ ಮಾಡಲಾಗುವುದು “ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇತ್ತೀಚೆಗೆ ಘೋಷಿಸಿದ್ದರು.
