9
Puttur: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ವಿಚಾರಕ್ಕೆ ಸಂಬಂಧಪಟ್ಟಂತೆ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರಿನ ಆರನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ.
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಕುರಿತು ಪ್ರಭಾಕರ್ ಭಟ್ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ಮಾಡಿದ ಕೋರ್ಟ್ ಪೊಲೀಸರಿಗೆ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ.
