Home » Rain: ಮೊಂಥಾ ಚಂಡಮಾರುತ ಎಫೆಕ್ಟ್ – ರಾಜ್ಯದ ಈ ಜಿಲ್ಲೆಗಳಲ್ಲಿ ರಣಮಳೆ ಎಚ್ಚರಿಕೆ, ಕರಾವಳಿಗೆ ಆರೆಂಜ್ ಅಲರ್ಟ್!!

Rain: ಮೊಂಥಾ ಚಂಡಮಾರುತ ಎಫೆಕ್ಟ್ – ರಾಜ್ಯದ ಈ ಜಿಲ್ಲೆಗಳಲ್ಲಿ ರಣಮಳೆ ಎಚ್ಚರಿಕೆ, ಕರಾವಳಿಗೆ ಆರೆಂಜ್ ಅಲರ್ಟ್!!

0 comments

Rain: ಮೊಂಥಾ ಚಂಡಮಾರುತ ಇಂದು ಅಂದರೆ ಮಂಗಳವಾರ ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಅಪ್ಪಳಿಸಲಿದ್ದು, ಕರ್ನಾಟಕದ ಈ ಭಾಗಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೌದು, ಕರ್ನಾಟಕ ರಾಜ್ಯದಲ್ಲಿ ಕರಾವಳಿ, ಮಲೆನಾಡು ಹಾಗೂ ಇತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುತ್ತಲೇ ಇದೆ. ಮುಂದಿನ 48 ಗಂಟೆಗಳ ಕಾಲ ಮೊಂಥಾ ಚಂಡಮಾರುತ ಪರಿಣಾಮವಾಗಿ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಕಂಡು ಬರಲಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆಯು ಮುಂದಿನ ಎರಡರಿಂದ ಐದು ದಿನಗಳ ಕಾಲ ಮತ್ತೆ ಅಬ್ಬರಿಸಲಿದೆ.

ಕರಾವಳಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬರುವ ಕಾರಣಕ್ಕೆ ಇಂದು ಆರೆಂಜ್ ಅಲರ್ಟ್ ಹಾಗೂ ನಾಳೆ ಬುಧವಾರ ಇದೇ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳೂರು, ಉಡುಪಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಭಾಗದ ಶಾಲೆ, ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಆಗುವ ಸಾಧ್ಯತೆ ಇದೆ.

You may also like