Home » Dhruva Sarja: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು

Dhruva Sarja: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು

0 comments

Dhruva Sarja: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ವಿರುದ್ಧ ಬನಶಂಕರಿ ಪೊಲೀಸ್ (Banshankari) ಠಾಣೆಯಲ್ಲಿ ದೂರು ದಾಖಲಾಗಿದೆ.

ಮನೋಜ್ ಎಂಬುವವರು ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಚಾಲಕ ಹಾಗು ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇವರುಗಳಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ನಮ್ಮ ಮನೆ ಮುಂದೆ ಫ್ಯಾನ್ಸ್‌ಗಳು ಬೈಕ್ ಪಾರ್ಕ್ ಮಾಡುತ್ತಾರೆ. ಮನೆಯ ಮುಂದೆಯೇ ಧೂಮಪಾನ ಮಾಡುತ್ತಾರೆ. ಮನೆಯ ಗೋಡೆಯ ಮೇಲೆ ಉಗಿಯುತ್ತಾರೆ. ಇದ್ದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಪ್ರತಿನಿತ್ಯ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಟನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ದೂರಿನನ್ವಯ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ.

You may also like